ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ (Udupi College Video Case) ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿ ಬೆಂಕಿ ಹತ್ತಿಕೊಂಡಿದೆ. ಈ ಪ್ರಕರಣ ಈಗಾಗಲೇ ರಾಜಕೀಯದ ಜೊತೆ ಕೋಮು ಬಣ್ಣಕ್ಕೆ ತಿರುಗಿದ್ದು, ಬಿಜೆಪಿ ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಈ ಮಧ್ಯೆ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವ ಬಿಜೆಪಿ ಕಾರ್ಯಕರ್ತೆ ಶಕುಂತಳಾ ಎಂಬಾಕೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಶಕುಂತಳಾ ಎಂಬಾಕೆ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಹೀಗಾಗಿ ಇದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತ ಬೆಂಗಳೂರಿನ ಹೈಗ್ರೌಂಡ್‌ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲು ಮಾಡಿದ್ದಾರೆ. ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಈಗಾಗಲೇ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪೋಸ್ಟ್‌ ಮಾಡಿದ್ದ ಶಕುಂತಳಾ ಎಂಬಾಕೆ ‘ಮುಸ್ಲಿಂ ಯುವತಿಯರು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್‌ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಳು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬ ವ್ಯಕ್ತಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತುಮಕೂರು ಮೂಲದ ಶಕುಂತಳಾ ಎಂಬಾಕೆಯ ವಿರುದ್ಧ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಕರಣವನ್ನು ಆಧರಿಸಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಶಕುಂತಳಾ ಎಂಬಾಕೆಯನ್ನು ಬಂಧಿಸಿದ್ದಾರೆ.ಅಂದ ಹಾಗೆ ಆರೋಪಿ ಶಕುಂತಳಾ ಈ ರೀತಿ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕೋದು ಇದೇ ಮೊದಲೇನಲ್ಲ. ಈ ಹಿಂದೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಅವಘಡಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿ ಮಸೀದಿಯ ಎಡಿಟೆಡ್‌ ಫೋಟೋವನ್ನು ಹಾಕಿದ್ದರು. ಈ ಪ್ರಕರಣವನ್ನು ಒಡಿಶಾ ಪೊಲೀಸರು ಗಂಭೀರವಾಗಿ ಪರಿಗಣಿಸುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ