ಸುಳ್ಯ : ಕಲ್ಲುಗುಂಡಿ ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಸಂಪಾಜೆ ಯಿಂದ ವರದಿ ಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಸಂಪಾಜೆ ಕಲ್ಲುಗುಂಡಿ ಮೇಲಿನ ಪೇಟೆಯ ರಸ್ತೆಯಲ್ಲಿ ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಜಖಂಗೊಂಡು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.