ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ (ರಿ.) ಸುಳ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಲಿ ಸುಳ್ಯ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಲಿ ಸುಳ್ಯ, ಶ್ರೀ ದುರ್ಗಾಪರಮೇಶ್ವರಿ ಚಾರಿಟೇಬಲ್ ಟ್ರಸ್ಟ್ (ರಿ.) ಸುಳ್ಯ ಇವರ ಸಹಭಾಗಿತ್ವದಲ್ಲಿ ಎ ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಸಹಕಾರಿಯ ಗೌರವಾನ್ವಿತ ಸದಸ್ಯರಾಗಿದ್ದ ದಿವಂಗತ ಶ್ರೀ ಉಪೇಂದ್ರ ಅನಂತ ಕಾಮತ್ ಇವರ ಸ್ಮರಣಾರ್ಥ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯದಲ್ಲಿ ದಿನಾಂಕ 07-07-2024 ಭಾನುವಾರದಂದು ನಡೆದ ಬೃಹತ್ ಉಚಿತ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ನಂದಕುಮಾರ್ ಬಿ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಣೇಶ್ ಕ್ಯಾಶ್ಯೂ ಇಂಡಸ್ಟ್ರೀಸ್‌ ಅಡ್ಕಾರು ಸುಳ್ಯ ಇದರ ಮಾಲಕರಾದ ಶ್ರೀ ಸುಧಾಕರ ಕಾಮತ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ವಿನಯಚಂದ್ರ ಕಿಲಂಗೋಡಿ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಲಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ಅನಿತ ಕೆ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯವ ಸಮಾಜ (ರಿ.) ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀ ವಾಸುದೇವ ನಾಯಕ್ ಇವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಉಪಾಧ್ಯಕ್ಷಾರಾದ ಶ್ರೀ ಉಮೇಶ್ ಪ್ರಭು ಕೆ ಇವರು ಸಹಕಾರಿ ಬೆಳವಣಿಗೆಯ ಕುರಿತು ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಟ್ರಸ್ಟಿಯಾದ ಶ್ರೀ ಕೆ ಆರ್ ಗೋಪಾಲಕೃಷ್ಣ ಸುಳ್ಯ ಇವರು ಟ್ರಸ್ಟಿನ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಶಿಬಿರಿದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ವಿನಂತಿಸಿದರು.

ಶಿಬಿರದಲ್ಲಿ 400ಕ್ಕೂ ಅಧಿಕ ಜನರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಅವಶ್ಯವಿದ್ದ 170ಜನರಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಿವಿ ಮೂಗು ಗಂಟಲು ತಪಾಸಣೆ ವಿಭಾಗ, ಚರ್ಮ ತಪಾಸಣಾ ವಿಭಾಗ, ಎಲುಬು ಮತ್ತು ಕೀಲು ತಪಾಸಣಾ ವಿಭಾಗ, ನೇತ್ರ ತಪಾಸಣಾ ವಿಭಾಗಗಳು ಭಾಗವಹಿಸಿದ್ದವು.

ಕುಮಾರಿ ದೀಪಾರವರು ಪ್ರಾರ್ಥಿಸಿದರು, ಸಹಕಾರಿಯ ಹಿರಿಯ ವ್ಯವಸ್ಥಾಪಕರಾದ ಶ್ರೀ ದೇವಿಪ್ರಸಾದ್ ಎ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹಕಾರಿಯ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಬಿ ಎಸ್ ಇವರು ವಂದಿಸಿದರು. ಸಹಕಾರಿಯ ಸುಳ್ಯ ಶಾಖೆಯ ಹಿರಿಯ ಅಧಿಕಾರಿಯಾದ ಶ್ರೀ ಸಂದೇಶ್ ಕುಮಾರ್ ಐ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *