Advertisement
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲದಲ್ಲಿ (Vitla) ಬೆಳಕಿಗೆ ಬಂದಿದೆ. ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕವಾಗಿ ಅತ್ಯಚಾರ ನಡೆಸಿದ್ದಾರೆ. ಅಲ್ಲದೇ 2019 ರಿಂದ ನಿರಂತರವಾಗಿ ವಿವಿಧ ಕಡೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
Advertisement