Advertisement

ಮೈಸೂರು: ಜಿ20 ಶೃಂಗಸಭೆ ಗಣ್ಯರು ಮೈಸೂರು ಅರಮನೆಗೆ (Mysuru Palace) ಭೇಟಿ ನೀಡುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜಿ20 ಗಣ್ಯರು ಮತ್ತು ಅಧಿಕಾರಿಗಳು ಅರಮನೆಗೆ ಭೇಟಿ ನೀಡಲಿದ್ದು, ಆಗಸ್ಟ್ 1 ಮತ್ತು 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಆಗಸ್ಟ್ 1ರಂದು ಮಧ್ಯಾಹ್ನ 2:30ರಿಂದ ನಿರ್ಬಂಧ ಆದೇಶವನ್ನು ಹೊರಡಿಸಲಾಗಿದ್ದು, ಆಗಸ್ಟ್ 2ರಂದು ಮಧ್ಯಾಹ್ನ ಧ್ವನಿ ಬೆಳಕು ಕಾರ್ಯಕ್ರಮವನ್ನು ಕೂಡಾ ರದ್ದುಗೊಳಿಸಲಾಗಿದೆ. ಅಲ್ಲದೇ ಭದ್ರತಾ ದೃಷ್ಟಿಯಿಂದ ಅರಮನೆಯ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಪೊಲೀಸರು ನಿಷೇಧಿಸಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ