ಬೆಳ್ಳಂಬೆಳಗ್ಗೆ ನೇಪಾಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಭೀಕರ ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಬಂದರು. ಈ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.8 ಎಂದು ಅಳೆಯಲಾಗಿದೆ.

ನೇಪಾಳದಲ್ಲಿ ಭೂಕಂಪ ಸಂಭವಿಸಿರುವುದನ್ನು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮತ್ತು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಖಚಿತಪಡಿಸಿವೆ. ಅಲ್ಲದೆ ಈ ಭೂಕಂಪದ ಕೇಂದ್ರಬಿಂದು ಜುಮ್ಲಾ ಜಿಲ್ಲೆಯಲ್ಲಿ ಭೂಮಿಯಡಿಯಲ್ಲಿ 10 ಕಿಲೋಮೀಟರ್ ಆಳದಲ್ಲಿದೆ ಎಂದು ಮಾಹಿತಿ ನೀಡಿದರು.

ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ ಹಾನಿಯಾಗದಿದ್ದರೂ, ಭೂಕಂಪನದ ಕಂಪನದಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಏಕೆಂದರೆ ಈ ಮೊದಲು ಅಂದರೆ 2023ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭೂಕಂಪ 70ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿತ್ತು.

Leave a Reply

Your email address will not be published. Required fields are marked *