Advertisement
ಚಿಕ್ಕಮಗಳೂರು: ಕೇದಾರನಾಥ ಯಾತ್ರೆಗೆ (Kedarnath Yatra) ತೆರಳಿದ್ದ ಚಿಕ್ಕಮಗಳೂರು (Chikkamagaluru) ಮೂಲದ ಯುವಕನೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಡಿಗೆರೆ (Mudigere) ತಾಲೂಕು ಜನ್ನಾಪುರ ಗ್ರಾಮದ ಗಿರೀಶ್ (25) ಮೃತಪಟ್ಟ ಯುವಕ. ಕಳೆದ ವಾರ ಮೂಡಿಗೆರೆಯಿಂದ ಗಿರೀಶ್ ಕೇದಾರನಾಥ ಯಾತ್ರೆಗೆ ತೆರಳಿದ್ದ. ದುರಾದೃಷ್ಟವಶಾತ್ ಆತ ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ಗಿರೀಶ್ ಕುಟುಂಬಸ್ಥರಿಗೆ ಕೇದಾರನಾಥ ಪೊಲೀಸರು ಮಾಹಿತಿ ನೀಡಿದ್ದಾರೆ. ಗಿರೀಶ್ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ. ಪ್ರಸ್ತುತ ಗಿರೀಶ್ ಮೃತದೇಹ ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿದೆ.
Advertisement