Advertisement

ಮುಂಬೈ: ಸಮೃದ್ಧಿ ಎಕ್ಸ್‌ಪ್ರೆಸ್ ವೇಯ (Samruddhi Expressway) ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿಯ ಮೇಲೆ ಕ್ರೇನ್ (Crane) ಕುಸಿದು ಬಿದ್ದಿದ್ದು, 16 ಮಂದಿ ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಥಾಣೆ (Thane) ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಬೈಲ್ ಗ್ಯಾಂಟ್ರಿ ಕ್ರೇನ್ ಅನ್ನು ಸೇತುವೆ ನಿರ್ಮಾಣದಲ್ಲಿ ಮತ್ತು ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್‌ಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ ಮುಂಬೈನಿಂದ 80 ಕಿಲೋ ಮೀಟರ್ ದೂರದಲ್ಲಿರುವ ಶಹಪುರ್ ತೆಹಸಿಲ್ ಸರ್ಲಾಂಬೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇಲೆಕ್ಟ್ರಾನಿಕ್ ಪ್ರೌಡಕ್ಟ್ಸ್’ಗಳಲ್ಲಿ ಒರಿಜಿನಲ್ ಅಥವಾ ಡೂಪ್ಲಿಕೇಟ್ ಹೇಗೆ ಕಂಡುಹಿಡಿಯುವುದು.

ಘಟನೆ ನಡೆದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಮಂಗಳವಾರ ಮುಂಜಾನೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಎಂಎಸ್‌ಆರ್‌ಡಿಸಿ ಸಚಿವ ದಾದಾ ಭೂಸೆ, ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಯುತ್ತಿದೆ ಎಂದರು. ಅಧಿಕಾರಿಗಳ ಪ್ರಕಾರ ಕನಿಷ್ಟ ಆರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ