ಸವಣೂರು, ಡಿ 21: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್‌ರವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ದೇಶದಾದ್ಯಂತ ಹಮ್ಮಿಕೊಂಡ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿಯು ಸವಣೂರು ಜಂಕ್ಷನ್‌ನಲ್ಲಿ ಬ್ಲಾಕ್ ಅಧ್ಯಕ್ಷರಾದ ರಫೀಕ್ ಎಂ ಎ ರವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಯಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್‌ಡಿಪಿಐ ಮುಖಂಡರು, ದಲಿತ ಮುಖಂಡ ಆನಂದ ಮಿತ್ತಬೈಲುರವರು ಮಾತನಾಡಿ, ಜಗತ್ತಿನ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಡಾ ಬಿ ಆರ್ ಅಂಬೇಡ್ಕರ್ ಅವರು ಭಾರತಕ್ಕೆ ಸಮರ್ಪಿಸಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ವಿರುದ್ಧ ಅಮಿತ್ ಶಾ ಬಾಯಿಗೆ ಬಂದಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಝಾಕ್ ಕೆನರಾ ರವರು ಮಾತನಾಡಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ, ಅಮಿತ್ ಶಾ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಇರುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಾಧವ ದೇವಸ್ಯ, ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರೂ, ದಲಿತ ಮುಖಂಡರಾದ ಕೃಷ್ಣಪ್ಪ ಸುಣ್ಣಾಜೆ, ಸಹಿತ ಪಕ್ಷದ ಹಿತೈಷಿಗಳು, ಅಂಬೇಡ್ಕರ್ ಅಭಿಮಾನಿಗಳು, ಸಂವಿಧಾನ ಪ್ರೇಮಿಗಳು ಭಾಗವಹಿಸಿದ್ದರು. ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿ ಕಾರ್ಯದರ್ಶಿ ಹಮೀದ್ ಮರಕ್ಕಡ ಸ್ವಾಗತಿಸಿ ಸವಣೂರು ಗ್ರಾಮ ಸಮಿತಿ ಕಾರ್ಯದರ್ಶಿ ರಫೀಕ್ ಪಲ್ಲತ್ತಮೂಲೆ‌ರವರು ಧನ್ಯವಾದಗೈದರು.

Leave a Reply

Your email address will not be published. Required fields are marked *