ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ರಾತ್ರಿ 12ಗಂಟೆ ಸುಮಾರಿಗೆ ಘಟನೆ ನಡೆದಿದ್ದು , ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅಗ್ನಿಶಾಮಕ ದಳದ ಸಿಬ್ಬಂದಿ‌ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಮೂರು ಗಂಟೆಗೂ ಅಧಿಕ ಸಮಯದ ಬಳಿಕ ಬೆಂಕಿಯನ್ನು ನಂದಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *