ಕಳಂಜ: ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ, ಆರೋಪಿ ಭಾಸ್ಕರ್ ಕೆ.ಎಂ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

2022 ಜು.19ರಂದು ಕಳಂಜದಲ್ಲಿ 8 ಮಂದಿ ಕೊಲೆಗಡುಕರ ತಂಡ ಮಸೂದ್ ಎಂಬ ಯುವಕನ ಮೇಲೆ ಭೀಕರ ಹಲ್ಲೆ ನಡೆಸಿದ್ದರು, ಗಂಭೀರ
ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಪ್ರಕರಣದ 8 ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದುಬಂದಿದೆ.‌

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ