ಡಿ ಕೆ ಸುರೇಶ್ (DK Suresh) ತಂಗಿ (Sister) ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ (Gold) ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡ ಐಶ್ವರ್ಯ ಗೌಡ (Aishwarya Gowda) ಎಂಬ ಮಹಿಳೆ ವಂಚನೆ ಮಾಡಿದ್ದಾರೆ.
ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದಾರೆ. ಚಂದ್ರ ಲೇಔಟ್ ನಿವಾಸಿ ಆಗಿರುವ ವನಿತಾ ಐತಾಳ್ ಅವರು ಐಶ್ವರ್ಯ ಗೌಡ ವಿರುದ್ಧ ದೂರು ನೀಡಿದ್ದಾರೆ.
ಹಣ ಕೇಳಿದಾಗ ಡಿ ಕೆ ಸುರೇಶ್ರಿಂದ ಕರೆ?
ಐಶ್ವರ್ಯ ಗೌಡ 2023ರ ಅಕ್ಟೋಬರ್ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಚಿನ್ನ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಐಶ್ವರ್ಯಳನ್ನ ಹಣ ಕೇಳಿದಾಗ ಡಿ ಕೆ ಸುರೇಶ್ರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಾಗಿದೆ. ಅಲ್ಲದೆ ಸಿನಿಮಾ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ ಎಂದು ವಂಚನೆ
ಐಶ್ವರ್ಯ ಗೌಡ ಅವರ ಪತಿ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ ಕೆ ಸುರೇಶ್ ತಂಗಿ, ನನಗೆ ಅನೇಕ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.