Advertisement
ಸುಳ್ಯ ಆಗಸ್ಟ್ ೦೭; ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಸುಳ್ಯದ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆಯನ್ನು ಆಗಸ್ಟ್ ೭ರಂದು ಆಚರಿಸಲಾಯಿತು.
ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಮ್ ಎಮ್ ಸುಳ್ಯದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ದಿವಂಗತ ಡಾ. ಕೆವಿಜಿಯವರ ಶಿಕ್ಷಣ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತಾ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ. ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತಾ ಕೆ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಪುಷ್ಪ ನಮನವನ್ನು ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು.
Advertisement