Advertisement


ಸುಳ್ಯ ಆಗಸ್ಟ್ ೧೫; ದೇಶಭಕ್ತರ ತ್ಯಾಗ-ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರö್ಯ ಲಭಿಸಿದ್ದು ಇಂದು ರಾಷ್ಟ ಸೇವೆಗೈಯುತ್ತಿರುವ ಸೈನಿಕರ ಶ್ರಮದಿಂದ ನಾವು ನಿರ್ಭಿತರಾಗಿದ್ದೇವೆ. ತಾಂತ್ರಿಕತೆ ಮತ್ತು ಆರೋಗ್ಯದಲ್ಲಿ ಭಾರತ ಮುಂದಿದ್ದು ದೇಶದ ಮಾನವ ಸಂಪನ್ಮೂಲಗಳು ಸದ್ಬಳಕೆಯಾಗುತ್ತಿರುವುದರಿಂದ ನಮ್ಮ ದೇಶ ಮುಂದುವರಿದ ರಾಷ್ಟಗಳ ಸಾಲಿನತ್ತ ಸಾಗುತ್ತಿದೆ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡರು ೭೭ನೇ ಸ್ವಾತಂತ್ರö್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಸುಳ್ಯದ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ , ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ. ಬಾಲಚಂದ್ರ ಗೌಡ ಮತ್ತು ಡಾ. ಪೂವಪ್ಪ ಕಣಿಯೂರು, ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಮ್ ಎಮ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ. ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತಾ ಕೆ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ