ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

Leave a Reply

Your email address will not be published. Required fields are marked *