Advertisement
ಸುಳ್ಯ: ಇಲ್ಲಿನ ಗಾಂಧಿನಗರದ ಆಲೆಟ್ಟಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ, ಸಾರ್ವಜನಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಇದರಿಂದ ಆಕ್ರೋಶಗೊಂಡ ಸ್ಥಳೀಯರು ಹೊಂಡದಲ್ಲಿ ಸಸಿ ನೆಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾಗಿದೆ
Advertisement