ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ದಲ್ಲಿರುವ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯರು ಅಬ್ದುಲ್ ಜಬ್ಬಾರ್ ಖಾನ್ ಇವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ದ. ಕ.ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಸುಳ್ಯ, ಪುತ್ತೂರು, ಕಡಬ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ದ ಪರವಾಗಿ ಸನ್ಮಾನಿಸಲಾಯಿತು
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಬ್ದುಲ್ ಜಬ್ಬಾರ್ ರವರು ಶಿಕ್ಷಣ ದಿಂದ ಅಲ್ಪಸಂಖ್ಯಾತ ಸಮುದಾಯ ಸಾಮಾಜಿಕವಾಗಿ, ಆರ್ಥಿಕವಾಗಿ, ಅಭಿವೃದ್ಧಿ ಹೊಂದಲು ಸಾಧ್ಯ ಎಂದರು
ಕರಾವಳಿ ಜಿಲ್ಲೆಯಲ್ಲಿ ಅನೇಕ ಶಿಕ್ಷಣ ಸಂಸ್ಥೆ ಗಳನ್ನು ಹೊಂದಿದ್ದು ಸಾಮರಸ್ಯದ ವಾತಾವರಣ
ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಅಹ್ಮದ್ ದಾವಣಗೆರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಸಂಯೋಜಕ ಸಂಶುದ್ದೀನ್ ಸುಳ್ಯ, ವಿಟ್ಲ -ಉಪ್ಪಿನoಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜರಾಮ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ. ಎಸ್. ಮಹಮ್ಮದ್, ಪುತ್ತೂರು ನಗರಸಭಾ ಸದಸ್ಯ ರಿಯಾಜ್, ಕಡಬ ಬ್ಲಾಕ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ ಮೊದಲಾವರು ಉಪಸ್ಥಿತರಿದ್ದರು
Advertisement
Advertisement