ಸುಳ್ಯ: ಸದಾ ಸಮಾಜಮುಖಿ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಸುಳ್ಯದ KA 21 ಸುಳ್ಯ ವಾಟ್ಸಾಪ್ ಗ್ರೂಪ್ ವತಿಯಿಂದ ಹೈಸ್ಕೂಲ್ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜನವರಿ 5, ಭಾನುವಾರದಂದು ಸಂಜೆ 7 ಗಂಟೆಗೆ, ಸುಳ್ಯದ ಜಟ್ಟಿಪ್ಪಳ್ಳದಲ್ಲಿರುವ ನೂತನ ಅನ್ಸಾರಿಯಾ ಗಲ್ಫ್ ಆಡಿಟೋರಿಯಂನಲ್ಲಿ ಕಾರ್ಯಾಗಾರ ನಡೆಯಲಿದೆ.
ಮಂಗಳೂರಿನ ಯೆನೆಪೋಯ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ಸಿನಾನ್ ಝಕಾರಿಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಹತ್ತನೇ ತರಗತಿ ಸೇರಿದಂತೆ ಹೈಸ್ಕೂಲ್ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ, ತಮ್ಮ ಮುಂದಿನ ಶೈಕ್ಷಣಿಕ ಅಯ್ಕೆಗಳ ಕುರಿತು ಸೂಕ್ತ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು KA 21 ಸುಳ್ಯ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್ ಫೈಝಲ್ ಕಟ್ಟೆಕ್ಕಾರ್ಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪೋಷಕರಿಗೂ ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9900405928 ಸಂಪರ್ಕಿಸಲು ಕೋರಲಾಗಿದೆ.