Advertisement
ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರಯಾನ ಯಶಸ್ಸಿನ ಬಳಿಕ ನಾಸಾ (NASA) ಆಡಳಿತಾಧಿಕಾರಿ ಬಿಲ್ ನಲ್ಸೆನ್ (Bill Nelson) ಟ್ವೀಟ್ (Tweet) ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಸ್ರೋ (ISRO) ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ (Vikram Lander) ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಪ್ರತಿಯೊಬ್ಬ ಭಾರತೀಯ ಪ್ರಜೆ ಹೆಮ್ಮೆ ಪಡುವ ಕ್ಷಣ ಇದಾಗಿದೆ. ಈ ಕುರಿತು ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್ ಟ್ವೀಟ್ ಮಾಡಿ ಇಸ್ರೋ ತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
Advertisement