Advertisement
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಭಾನುವಾರ ರಾತ್ರಿ ಆಗಮಿಸಿದರು.
ಸೋಮವಾರ ಮುಂಜಾನೆ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರನ್ನು ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಸ್ವಾಗತಿಸಿದರು. ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ .ಎ ಇ ಒ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
Advertisement