Advertisement

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ನಡೆಸುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ. ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆ ದಿನ. ನವೆಂಬರ್ 5 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ