Advertisement
ಸುಳ್ಯ: ಚಿರತೆಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದೆ.
ಪಡ್ಡಂಬೈಲು ಎಂಬಲ್ಲಿ ಸುಮಾರು ಒಂದೂವರೆ ವರ್ಷದ ಚಿರತೆ ಉರುಳಿಗೆ ಸಿಲುಕಿ ಸಾವನ್ನಪ್ಪಿದೆ. ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಸಾವನಪ್ಪಿರುವ ಚಿರತೆ ಮರಣೋತ್ತರ
ಪರೀಕ್ಷೆ ನಡೆಸಿದ್ದಾರೆ. ವನ್ಯ ಜೀವಿ ಹತ್ಯೆ ಸಂಬಂಧಪಟ್ಟಂತೆ ಪ್ರಕರಣ ಸಂಬಂಧಿಸಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
Advertisement