ಆಗಸ್ಟ್ 31; ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಓಣಂ ಸಂಭ್ರಮಾಚರಣೆ ಆಗಸ್ಟ್ 31ರ ಗುರುವಾರದಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿ. ಸುಳ್ಯದ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಹಳ ಅದ್ದೂರಿಯಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತು ಹೆಮ್ಮೆ ವ್ಯಕ್ತಪಡಿಸಿ, ಮುಂದಿನ ವರ್ಷದಿಂದ ಕೆವಿಜಿ ಕ್ಯಾಂಪಸ್ ನ ವಿವಿಧ ಶಿಕ್ಷಣ ಸಂಸ್ಥೆಗಳು ಜೊತೆಗೂಡಿ ಮಾತೃ ಸಂಸ್ಥೆಯಾದ ಎನ್ಎಂಸಿಯಲ್ಲಿ ಏರ್ಪಡಿಸುವ ಇರಾದೆಯನ್ನು ವ್ಯಕ್ತಪಡಿಸಿದ್ದರು. ಯುವ ಮನಸ್ಸುಗಳ ಮಿಡಿತವನ್ನು ಅರಿತು ವಿದ್ಯಾರ್ಥಿಗಳು ಏರ್ಪಡಿಸಿದ್ದ ವಿವಿಧ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದರು. ರಂಗಮಂದಿರದಲ್ಲಿ ನುರಿತ ತಂಡದವರಿಂದ ಸಿಂಗಾರಿ ಮೇಳದ ಪ್ರದರ್ಶನ, ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಟ್ಟವು.

ಹಾಗೆಯೇ ವಿವಿಧ ಮನೋರಂಜನ ಕ್ರೀಡಾ ಸ್ಪರ್ಧೆಗಳನ್ನೂ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ, ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ಎಂ ಎಂ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕೃಪಾ ಎ ಎನ್ ಮತ್ತು ಹರಿಪ್ರಸಾದ್ ಅತ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ