ನಾನು ಅತ್ಯಂತ ಬಡತನದಲ್ಲಿ ಬೆಳೆದವನು, ಮಂಗಳೂರಿನ ಬಸ್ ನಿಲ್ದಾಣದಲ್ಲಿ ಕಿತ್ತಳೆ ಹಣ್ಣು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ನನಗೆ ನನ್ನೂರಿನ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕೆಂಬ ಆಸೆ. ಕಿತ್ತಳೆ ಹಣ್ಣು ವ್ಯಾಪಾರದಲ್ಲಿ ಬಂದ ಹಣವನ್ನು ಶಾಲೆ ನಿರ್ಮಾಣಕ್ಕೆ ಮುಡುಪಿಟ್ಟು, ನನ್ನೂರಿನ ಮಕ್ಕಳು ಶಿಕ್ಷಣವಂತರಾಗಬೇಕೆಂದು ಶಾಲೆ ನಿರ್ಮಾಣಕ್ಕೆ ಮುಂದಾದ ಅಕ್ಷರಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಹರ್ಲಡ್ಕ ವಿಲ್ಲಾಗೆ ಭೇಟಿ ನೀಡಿದ ಸಂದರ್ಭ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.