ಸವಣೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆಯು ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯವರಾದ ಜಮಾಲ್ ಜೋಕಟ್ಟೆಯವರ ವಿಶೇಷ ಉಸ್ತುವಾರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು, ತಳಮಟ್ಟದಿಂದ ನಡೆಯುವ ಪಕ್ಷದ ಸಮಿತಿಗಳ ಆಂತರಿಕ ಚುನಾವಣೆಗೆ ರೂಪವೇಷಗಳನ್ನು ಮಾಡಲಾಯಿತು.
ಜಿಲ್ಲಾ ಸಮಿತಿಯ ಕಾರ್ಯದರ್ಶಿಯವರಾದ ಜಮಾಲ್ ಜೋಕಟ್ಟೆಯವರು ಆಂತರಿಕ ಚುನಾವಣೆಯ ರೀತಿ ನೀತಿಗಳನ್ನು ವಿವರಿಸಿ, ಚುನಾವಣೆಗಳ ಉಸ್ತುವಾರಿಗಳನ್ನು ಸಭೆಯಲ್ಲಿ ಚರ್ಚೆ ಮಾಡಿ ನೇಮಿಸಿದರು.
ಅಧ್ಯಕ್ಷರಾದ ಅಬ್ದುಲ್ ರಜಾಕ್ ಕೆನರಾ ರವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷವು ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಕ್ತಿಯುತವಾಗಿ ಬೆಳೆದು ಬಂದಿರುತ್ತದೆ. ಮುಂದಿನ ದಿನಗಳಲ್ಲಿ ನಾಯಕರುಗಳು ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಲು ಕರೆ ನೀಡಿದರು.
ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಕಲಾಮ್ ರವರು ಮಾತನಾಡಿ ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಈಗಲೇ ತಯಾರಿಗಳನ್ನು ನಡೆಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಬೂತ್ ಮಟ್ಟದ ನಾಯಕರುಗಳಿಗೆ , ಸಮಿತಿಯ ಸದಸ್ಯರುಗಳಿಗೆ ಕಿವಿಮಾತು ಹೇಳಿದರು.
ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿಯರಾದ ಶರೀಫ್ ನಿಂತಿಕಲ್, ಕೋಶಾಧಿಕಾರಿ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

ಪಕ್ಷದ ಸಂಘಟನಾ ಕಾರ್ಯದರ್ಶಿ ಸಿದ್ದಿಕ್ ಸವಣೂರು ರವರ ಸ್ವಾಗತದೊಂದಿಗೆ ಆರಂಭವಾದ ಕಾರ್ಯಕ್ರಮವು ಸಮಿತಿಯ ಜೊತೆ ಕಾರ್ಯದರ್ಶಿಯವರಾದ ಅಶ್ರಫ್ ಟರ್ಲಿ ಯವರ ವಂದನಾರ್ಪಣೆಯೊಂದಿಗೆ ಕೊನೆಗೊಂಡಿತು,

Leave a Reply

Your email address will not be published. Required fields are marked *