Advertisement

ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾದ
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ (ರಿ) ಕೊಳ್ತಿಗೆ ~ ಪೆರ್ಲಂ ಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷ ಭರತ್ ರಾಜ್ ಕುದ್ಕುಳಿ ಸಭಾಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಕ್ಕಮ್ಮ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಡಾ. ಅನುರಾಧಾ ಕುರುಂಜಿಯವರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ಕೊಳ್ತಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪ್ರಮೋದ್ ಕೆ ಎಸ್, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ತೀರ್ಥಾನಂದ ಗೌಡ ದುಗ್ಗಳ, ಆದಿಶಕ್ತಿ ಮಹಿಳಾ ಮಂಡಲ, ಪೆರ್ಲಂಪಾಡಿ ಇದರ ಅಧ್ಯಕ್ಷರಾದ ಶ್ರೀಮತಿ ಮಮತಾ ಗೋಳಿತ್ತಡ್ಕ
ಯುವಕ ಮಂಡಲ ಕೊಳ್ತಿಗೆ ಇದರ ಕಾರ್ಯದರ್ಶಿಯಾದ ವಿಜೇತ್ ರೈ ಕೆಳಗಿನಮನೆ ಮೊದಲಾದವರು ಉಪಸ್ಥಿತರಿದ್ದರು

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ