Advertisement

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ. ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ವಿಧಾನ ಸೌಧದಲ್ಲಿ‌ ಮಾತನಾಡಿದ ಅವರು, ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ (Social Media) ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟಿಸ್‌ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದರು. ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ. ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾವಣೆಯಾಗಿದೆ ಎಂದರು. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ