ಐಸಿಸಿ 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನದ್ದಾರೆ. 2024ರಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಸ್ಥಿರತೆ, 71 ವಿಕೆಟ್‌ಗಳ ಸಾಧನೆ ಈ ಪ್ರಶಸ್ತಿಯನ್ನು ಅವರಿಗೆ ಗಳಿಸಿಕೊಟ್ಟಿದೆ. ಬುಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮೊದಲ ವೇಗದ ಬೌಲರ್ ಆಗಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂಬುದು ವಿಶೇಷ. ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿದೆ. 2024 ರಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದ ಜಸ್ಪ್ರೀತ್ ಬುಮ್ರಾ ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರವಾಗಿ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರನೆಂದರೆ ಅದು ಬುಮ್ರಾ. ಇಡೀ ಸರಣಿಯಲ್ಲಿ ಬುಮ್ರಾ ತಮ್ಮ ಕರಾರುವಕ್ಕಾದ ದಾಳಿಯಿಂದ ಆಸೀಸ್ ಆಟಗಾರರನ್ನು ಕಟ್ಟಿಹಾಕದಿದ್ದರೆ, ಟೀಂ ಇಂಡಿಯಾ ಇಡೀ ಸರಣಿಯಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸುವ ಸಾಧ್ಯತೆಗಳಿದ್ದವು. ಆಸೀಸ್ ವಿರುದ್ಧದ ಪ್ರದರ್ಶನಕ್ಕಾಗಿ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಐಸಿಸಿ, ಬುಮ್ರಾರನ್ನು ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಆಯ್ಕೆ ಮಾಡಿದೆ.

Leave a Reply

Your email address will not be published. Required fields are marked *