ತಿರುವನಂತಪುರ: ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ 10ನೇ ತರಗತಿ ಬಾಲಕನನ್ನು ಅಪಘಾತ ಮಾಡಿ ಕೊಲೆ ಮಾಡಿದ ಘಟನೆಯೊಂದು ಕೆರಳದಲ್ಲಿ (Kerala) ನಡೆದಿದೆ. ಮೃತ ಬಾಲಕನನ್ನು ಅದಿಶೇಖರ್ (15) ಎಂದು ಗುರುತಿಸಲಾಗಿದೆ. ಸಂಬಂಧಿಕನೇ ಈತನನ್ನು ಕೊಲೆ ಮಾಡಿರುವುದು ಬಯಲಾಗಿದೆ. ಅರುಣ್ ಕುಮಾರ್ ಹಾಗೂ ದೀಪಾ ಮಗನಾಗಿರುವ ಅದಿಶೇಖರ್, ಆಗಸ್ಟ್ 31ರಂದು ಮೃತಪಟ್ಟಿದ್ದಾನೆ. ಈತ ಕತ್ತಕ್ಕಡ ಚಿನ್ಮಯ ಮಿನ್ ಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದನು. ಈ ಘಟನೆ ಪುಳಿಂಕೋಡ್ ದೇವಸ್ಥಾನದ ಬಳಿ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಮೊದಲು ಇದೊಂದು ಅಪಘಾತ ಎಂದು ಬಿಂಬಿಸಿದ್ದರೂ, ಸಿಸಿಟಿಯಲ್ಲಿ ಕೃತ್ಯದ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಇದು ಅಪಘಾತ ಅಲ್ಲ ಕೊಲೆ ಎಂಬುದು ಬಯಲಾಗಿದೆ. ನಡೆದಿದ್ದೇನು..?: ಅದಿಶೇಖರ್ ಸೈಕಲ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆ ತನಿಖೆ ವೇಳೆ ಪೊಲೀಸರಿಗೆ ಬಾಲಕನ ಸಂಬಂಧಿಕರ ಕಾರು ಗುದ್ದಿರುವುದಾಗಿ ತಿಳಿದುಬಂತು. ಅಪಘಾತದಲ್ಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದಾದ ಬಳಿಕ ಪೊಲೀಸರು ಘಟನೆ ನಡೆದ ಅಕ್ಕಪಕ್ಕದ ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದಾಗ ಸತ್ಯ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಪ್ರಿಯರಾಜನ್ ಬಾಲಕನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸಗಿರುವುದು ಬಯಲಾಗಿದೆ.

ಘಟನೆ ನಡೆದು ವಾರ ಕಳೆದರೂ ಪೊಲೀಸರು ಪ್ರಿಯರಾಜ್‌ನನ್ನು ಬಂಧಿಸಿರಲಿಲ್ಲ. ಹೀಗಾಗಿ ಆರೋಪಿಗೆ ನಿರೀಕ್ಷಣಾ ಜಾಮೀನು ಪಡೆಯಲು ಕೆಲ ಉನ್ನತ ಅಧಿಕಾರಿಗಳು ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಸಿಸಿಟಿವಿ ವೀಡಿಯೋದಲ್ಲೇನಿದೆ..?: ಬಾಲಕ ತನ್ನ ಪಾಡಿಗೆ ಸೈಕಲ್‌ನಲ್ಲಿ ಹೋಗುತ್ತಿರುತ್ತಾನೆ. ಈ ವೇಳೆ ರಸ್ತೆಬದಿಲ್ಲು ಪಾರ್ಕ್ ಮಾಡಿದ್ದ ಕಾರು ಏಕಾಏಕಿ ಸೈಕಲ್‌ಗೆ ಗುದ್ದಿದೆ. ಪರಿಣಾಮ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ಸಂಬಂಧ ಪೊಲೀಸರು ಆದಿಶೇಖರ್‌ನ ದೂರದ ಸಂಬಂಧಿ ಪೂವಾಚಲ ಮೂಲದ ಪ್ರಿಯರಂಜನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಓಣಂ ರಜೆಗೆಂದು ಮನೆಗೆ ಬಂದಿದ್ದ ಪ್ರಿಯರಂಜನ್ ಬಾಲಕ ಕೊಲೆಯಾದ ಬೆನ್ನಲ್ಲೇ ನಾಪತ್ತೆಯಾಗಿರುವುದು ಪೊಲೀಸರ ಅನುಮಾನವನ್ನು ಹೆಚ್ಚಿಸಿತ್ತು. ಕೊಲೆಗೆ ಕಾರಣವೇನು..?: ಮೃತ ಬಾಲಕ ಅದಿಶೇಖರ್ ಆರೋಪಿ ಪ್ರಿಯರಂಜನ್‌ಗೆ ದೂರದ ಸಂಬಂಧಿಯಾಗುತ್ತಾನೆ. ಅಂತೆಯೇ ಕಂಠಪೂರ್ತಿ ಕುಡಿದಿದ್ದ ಪ್ರಿಯರಂಜನ್ ದೇವಸ್ಥಾನದ ಬಳಿ ಕುಳಿತಿದ್ದನು. ಅಲ್ಲದೆ ದೇಗುಲದ ಆವರಣದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದನ್ನು ಅದಿಶೇಖರ್ ಪ್ರಶ್ನೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪ್ರಿಯರಂಜನ್ ಸೇಡು ತೀರಿಸಿಕೊಳ್ಳುವ ಹೊಂಚು ಹಾಕಿದ್ದಾನೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ