ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ನೇಮಕಗೊಂಡ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರು ಹಾಗೂ ಕಾರ್ಮಿಕ ನಾಯಕರಾದ ಕೆ.ಪಿ.ಜಾನಿ ಅವರನ್ನು ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಕೆ.ಪಿ.ಜಾನಿಯವರನ್ನು ಅಭಿನಂದಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕೆ.ಪಿ.ಜಾನಿಯವರು “ನಾನು ಕಳೆದ 20 ವರ್ಷಗಳಿಂದ ಕಾರ್ಮಿಕ ಸಂಘಟನೆಗಳಲ್ಲಿ ಸಕ್ರೀಯನಾಗಿ ದುಡಿಯುತ್ತಿದ್ದು, ಸರ್ಕಾರದಿಂದ ಬಡ ಕಾರ್ಮಿಕರಿಗೆ ಸಿಗುವ ಸವಲತ್ತುಗಳನ್ನು ತಲುಪಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದೀಗ ನನ್ನನ್ನು ಗುರುತಿಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರನ್ನಾಗಿ ನೇಮಕಗೊಳಿಸುವ ಮೂಲಕ ನನ್ನ ಜವಬ್ದಾರಿಯನ್ನು ಹೆಚ್ಚಿಸಿದೆ, ನನ್ನ ನೇಮಕಾತಿಗೆ ಸಹಕರಿಸಿದ ಕಾಂಗ್ರೆಸ್ ಪಕ್ಷದ ರಾಜ್ಯ, ಜಿಲ್ಲಾ, ಬ್ಲಾಕ್ ಹಾಗೂ ಗ್ರಾಮ ಮಟ್ಟದ ಎಲ್ಲಾ ನಾಯಕರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆಂದು” ಅವರು ಹೇಳಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಸೂರಜ್ ಹೊಸೂರು ಅವರು ಮಾತನಾಡಿ “ಕೆ.ಪಿ.ಜಾನಿಯವರು ಒರ್ವ ಅಪ್ಪಟ ಜಾತ್ಯಾತೀತ ನಾಯಕರಾಗಿದ್ದು, ಕೊಡಗಿನ ಕಾಂಗ್ರೆಸ್ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಮಂತರ್ ಗೌಡ ಅವರ ಗೆಲುವಿನಲ್ಲಿ ಕೆ.ಪಿ.ಜಾನಿಯವರ ಕೊಡುಗೆಯನ್ನು ನಾನು ಸ್ಮರಿಸುತ್ತೇನೆ ಹಾಗೂ ಇದು ಅರ್ಹ ವ್ಯಕ್ತಿಗೆ ಸಂದ ಗೌರವವೆಂದು” ಅವರು ಹೇಳಿದರು.

ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಸ್.ಮೊಯ್ದಿನ್ ಕುಂಞ ಕೊಯನಾಡು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ ನೆಲ್ಲಿಕುಮೇರಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ.ಎಸ್.ಯಮುನಾರವರು ಮಾತನಾಡಿ ಕೆ.ಪಿ.ಜಾನಿಯವರಿಗೆ ಶುಭಾಶಯಗಳನ್ನು ಸಲ್ಲಿಸಿದರು.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ, ಚೆಂಬು ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ಹೊಸೂರು, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಸುಶೀಲ ನಾಯ್ಕ್, ಚೆಂಬು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕುಸುಮಾವತಿ, ಸದಸ್ಯರಾದ ಗಿರೀಶ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಎಚ್.ಎ.ಹಮೀದ್,ಸುಳ್ಯ ಬ್ಲಾಕ್ ಕಾಂಗ್ರೇಸ್ ಸಮಿತಿ ಸದಸ್ಯ ತಾಜುದ್ದೀನ್ ಆರಂತೋಡು,ಸಂಪಾಜೆ ವಲಯ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀಧರ್ ಕಡೆಪಾಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್ ಸ್ವಾಗತಿಸಿ, ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ ವಂದಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ