ಸುಬ್ರಮಣ್ಯ: ಸರ್ಪಸಂಸ್ಕಾರ ಯಾಗ ಶಾಲೆಯ ಸಮೀಪ ಕ್ವಾಲಿಸ್ ಕಾರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗೆ ಆಹುತಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಸರ್ಪಸಂಸ್ಕಾರಕ್ಕಾಗಿ ಕುಕ್ಕೆ ಸುಬ್ರಮಣ್ಯಕ್ಕೆ ಬಂದಿದ್ದ ಕುಟುಂಬ ಬಂದು ಆದಿ ಸುಬ್ರಮಣ್ಯದ ಸರ್ಪಸಂಸ್ಕಾರ ಯಾಗ ಶಾಲೆಯ ಮುಂಭಾಗ ಕಾರು ನಿಲ್ಲಿಸಿದ್ದರು. ಕಾರಿನಲ್ಲಿ ಇದ್ದಕ್ಕಿದ್ದಂತೆಯೇ ಕಾಣಿಸಿಕೊಂಡ ಬೆಂಕಿ ಕಾರನ್ನು ಸಂಪೂರ್ಣ ವ್ಯಾಪಿಸಿದೆ ಎಂದು ತಿಳಿದು ಬಂದಿದೆ

. ಇದನ್ನು ಕಂಡ ಸಾರ್ವಜನಿಕರು ಕೂಡಲೇ ಕಾರ್ಯ ಪ್ರವೃತ್ತರಾಗಿ, ಬೆಂಕಿಯನ್ನು ನಂದಿಸಿದ್ದಾರೆ.ಕಾರಿನ ಹಿಂದೆ ಹಾಗೂ ಮುಂದೆ ಸಾಲಾಗಿ ನಿಂತಿದ್ದ ಸುಮಾರು 30ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗುವ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ