ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ


ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ ಪೂಜ್ಯ ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು. ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ