ಸುಳ್ಯದಲ್ಲಿ ಕಳೆದ ಮೂರುವರೆ ವರ್ಷಗಳಿಂದ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ನವೀನ್ ಜೋಗಿಯವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು
ನೂತನ ಸಿಐ ಯಾಗಿ ಕರ್ತವ್ಯಕ್ಕೆ ಆಗಮಿಸುತ್ತಿರುವ ಮೋಹನ್ ಕೊಟ್ಟಾರಿಯವರನ್ನು ಶಾಲು ಹೊದಿಸಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷರಾದ ಡಾ. ಗಾನ ಪಿ ಕುಮಾರ್, ಸುಳ್ಯ ಪೊಲೀಸ್ ಠಾಣೆ ಉಪ ನಿರೀಕ್ಷಕರಾದ ಈರಯ್ಯ,ಸುಬ್ರಹ್ಮಣ್ಯ ಪೊಲೀಸ್ ಠಾಣೆ ಉಪ ನಿರೀಕ್ಷಕರಾದ ಕಾರ್ತಿಕ್, ಬೆಳ್ಳಾರೆ ಅಪರಾಧ ವಿಭಾಗ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ್ ವಿಟ್ಲ ಪೊಲೀಸ್ ಅಪರಾಧ ವಿಭಾಗ ಉಪ ನಿರೀಕ್ಷಕ ರಾದ ರತನ್ ಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿಗಳಾದ ನಾರಾಯಣ ರೈ, ಚಂದಪ್ಪ ಮೊದಲಾದ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಸನ್ಮಾನ ಮಾಡಲಾಯಿತು
ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಎಸ್. ಸಂಶುದ್ದೀನ್, ಎಂ. ವೆಂಕಪ್ಪಗೌಡ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಟ್ರಸ್ಟ್ ಪದಾಧಿಕಾರಿಗಳಾದ ರಿಯಾಜ್ ಕಟ್ಟೆಕ್ಕಾರ್ಸ್, ಸಿದ್ದೀಕ್ ಕೊಕ್ಕೊ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಉದ್ಯಮಿ ಶಾಫಿ ಕುತ್ತಾಮೊಟ್ಟೆ,ಮೊದಲಾದ ವರು ಉಪಸ್ಥಿತರಿದ್ದರು
Advertisement
Advertisement