ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಎಂ.ಟೆಕ್ ವಿಭಾಗದ ವಿದ್ಯಾರ್ಥಿನಿ ಫರಾನ ಐ.ಎಂ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ೨ನೇ ರ್ಯಾಂಕ್ ಮತ್ತು ಲಿಖಿತ ಎ.ಬಿ. ೩ನೇ ರ್ಯಾಂಕ್ ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಎಂ.ಟೆಕ್ – ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ವಿಭಾಗದಲ್ಲಿ ಶ್ರೀದೇವಿ ಎಂ.ಎನ್. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ೪ನೇ ರ್ಯಾಂಕ್‌ ಪಡೆದಿರುತ್ತಾರೆ. ಇವರನ್ನು ಜೇರ್‌ಮೆನ್ ಕಮಿಟಿ ‘ಬಿ’ ಎ.ಪಿ.ಎಲ್.ಇ.(0) ಡಾ। ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ) ಡಾ. ಜ್ಯೋತಿ ಆರ್. ಪ್ರಸಾದ್, ಎಕ್ಸೆಕ್ಯುಟಿವ್ ಡೈರೆಕ್ಟರ್, ಕೆ.ವಿ.ಜಿ.ಡಿ.ಸಿ. &ಹೆಚ್. ಮೌರ್ಯ ಆರ್. ಕುರುಂಜಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ. ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ

Leave a Reply

Your email address will not be published. Required fields are marked *