ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು.10ರಂದು ಅಂಬಟೆಡ್ಕದಲ್ಲಿರುವ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜೆ.ಕೆ.ರೈಯವರನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಸನ್ಮಾನಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಧಾನ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ, ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ನಿರ್ದೆಶಕರಾದ ಗಂಗಾಧರ ಕಲ್ಲಪ್ಪಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಪ್ರಕಾಶ್ ಕುಕ್ಕೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಜ್ಞಾ ಎಸ್. ಸತ್ಯನಾರಾಯಣ ಸ್ವಾಗತಿಸಿ, ಕು. ಚೈತ್ರ ಪ್ರಾರ್ಥಿಸಿದರು. ದಯಾನಂದ ಕೊರತ್ತೋಡಿ ನಿರೂಪಿಸಿದರು.