ಸುಳ್ಯ: ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಮತ್ತು ಸಂಘಟನಾ ಸಮಿತಿ ರಾಷ್ಟ್ರೀಯ ಪ್ರೊ ಕಬಡ್ಡಿ ಇದರ ಸಂಯುಕ್ತ ಆಶ್ರಯದಲ್ಲಿ, ಇದೇ ಬರುವ ನವೆಂಬರ್ 17 ಮತ್ತು 18 ರಂದು ಸುಳ್ಯದಲ್ಲಿ ನಡೆಯಲಿರುವ ಐತಿಹಾಸಿಕ ಆಹ್ವಾನಿತ ತಂಡಗಳ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್ ರವರನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಯಿತು. ಆಹ್ವಾನ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಖಾದರ್ ರವರು ಕ್ರೀಡೆ ಸೌಹಾರ್ದತೆಗೆ ಉತ್ತಮ ಸೇತು ಬಂಧ, ಸುಳ್ಯದಲ್ಲಿ ಕ್ರೀಡೆಯ ಮೂಲಕ ಸಾಮರಸ್ಯದ ವಾತಾವರಣ ನಿರ್ಮಿಸಲು ಸಾಧ್ಯವಾಗಿದೆ, ನಾನು ಕೂಡ ಯುನಿವರ್ಸಿಟಿ ಮಟ್ಟದಲ್ಲಿ ಕ್ರೀಡಾಪಟು ಆಗಿದ್ದೆ, ಈ ಪಂದ್ಯಾಕೂಟದಲ್ಲಿ ಖಂಡಿತಾ ಭಾಗವಹಿಸಲು ಉತ್ಸುಕನಾ ಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ ಗೌರವಾಧ್ಯಕ್ಷ ಎಸ್. ಸಂಶುದ್ದೀನ್, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಕಬಡ್ಡಿ ಪಂದ್ಯಾಟದ ಸಂಘಟನಾ ಸಮಿತಿ ಅಧ್ಯಕ್ಷ ಸಂಶುದ್ದೀನ್ ಭಾರತ್ ಶಾಮಿಯಾನ, ಕಾರ್ಯದರ್ಶಿ ರಝಕ್, ಕೋಶಾಧಿಕಾರಿ ಜಿ. ಎ. ಮಹಮ್ಮದ್ ಸಹನ, ಸಂಚಾಲಕ ಶಾಫಿ ಪ್ರಗತಿ, ಧ್ವನಿ, ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಕಾರ್ಯದರ್ಶಿ ರಜ್ಜಾಕ್, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ