Advertisement
ಸಂಪಾಜೆಯಲ್ಲಿ ಇಂದು ಸಂಜೆ 4.40 ಕ್ಕೆ ಮಗದೊಮ್ಮೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಸಂಪಾಜೆ ಗ್ರಾಮ ಪಂಚಾಯತ್ ವಾಟ್ಸಪ್ ಗ್ರೂಪ್ ನಲ್ಲಿ ಅಧ್ಯಕ್ಷ ಜಿ.ಕೆ. ಹಮೀದ್ ಅವರು ತಿಳಿಸಿದ್ದು, ಹಾಗೂ ಇನ್ನೂ ಹಲವರಿಗೆ ಲಘು ಕಂಪನದ ಅನುಭವ ಆಗಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 7.45 ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿತ್ತು. ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ ಹೊಂದಿದ್ದ ಕಂಪನದಿಂದ ಜನರು ಭಯಭೀತರಾಗಿದ್ದಾರೆ. ಇದೀಗ ಮತ್ತೆ ಮತ್ತೆ ಭೂಮಿ ಕಂಪಿಸುತ್ತಿರುವುದರಿಂದ ಒಂದು ರೀತಿಯ ಭಯದ ವಾತಾವರಣ ಸೃಷ್ಟಿಯಾಗಿದೆ.
Advertisement