Advertisement
ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ (Heart Attack) ಸಂಭವಿಸಿ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ (Student) ರಾಹುಲ್ ಕೋಲಕಾರ (15) ಸಾವನ್ನಪ್ಪಿದ್ದಾನೆ. ಹುಲ್ಯಾಳ ಗ್ರಾಮದ ರಾಹುಲ್ ಇಲ್ಲಿನ ಶ್ರೀಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಅರ್ಧವಾರ್ಷಿಕ ಪರೀಕ್ಷೆಗೆ ತೆರಳಿದ್ದ. ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ. ವಿದ್ಯಾರ್ಥಿಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ಹೇಳಲಾಗುತ್ತಿದೆ.
Advertisement