ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಮತ್ತು ಆಯುಷ್ಮಾನ್ ಭಾರತ ಮಾಹಿತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲ ಜಯಪ್ರಕಾಶ್ ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಯ ಆರೋಗ್ಯ ಮಿತ್ರ ಮುರಳಿ ಎನ್ ಇವರು ಆಯುಷ್ಮಾನ್ ಭಾರತದ ಬಗ್ಗೆ ಮಾಹಿತಿ ನೀಡಿ ಆಯುಷ್ಮಾನ್ ಭಾರತ ಯೋಜನೆಯ ವಿವಿಧ ಸೌಲಭ್ಯಗಳ ಬಗ್ಗೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಭಾರತ ಬಗ್ಗೆ ಬಿತ್ತಿ ಚಿತ್ರ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಇನ್ನೋರ್ವ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್ ಎನ್. ಪಿ ವಂದಿಸಿದರು.
Advertisement
Advertisement