ಸುಳ್ಯ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಶಾಲೆಯಲ್ಲಿ ಗಾಂಧಿ ಜಯಂತಿ‌ ಆಚರಿಸಲಾಯಿತು. ಗಾಂಧೀ ಜಯಂತಿ ಪ್ರಯುಕ್ತ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಾಂತಿನಗರ ಶಾಲೆಯಿಂದ ರಾಷ್ಟ್ರೀಯ ಹೆದ್ದಾರಿ ತನಕ ಇರುವ ರಸ್ತೆಯ ಬದಿಯಲ್ಲಿರುವ ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಅದೇ ರೀತಿ ಶಾಲಾ ಮಕ್ಕಳಿಗೆ ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು. ಈ ಸಂಧರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಸದಸ್ಯರು, ಶಾಲಾ ಅಧ್ಯಾಪಕರು, ಶಾಲಾ‌ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ