ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ ಸಮಿತಿಯು ಟೂರ್ನಮೆಂಟ್‌ಗಾಗಿ ಹರ್ಷಿತ್ ರಾಣಗೆ ಬುಲಾವ್ ಕೊಟ್ಟಿದೆ.

ಟೂರ್ನಿ ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭವಾಗಲಿದೆ. ಬದಲಾದ ತಂಡದಲ್ಲಿ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯೂ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ ಬದಲಿಗೆ ವರುಣ್ ಆಯ್ಕೆಯಾಗಿದ್ದಾರೆ.

ಬುಮ್ರಾ ಅಲಭ್ಯತೆ ಭಾರತ ತಂಡಕ್ಕೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ದೊಡ್ಡ ಹಿನ್ನಡೆಯಾಗಿದೆ. ಭಾರತ ಈ ಟೂರ್ನಮೆಂಟ್ ಅನ್ನು ಎರಡು ಬಾರಿ (2002 ಮತ್ತು 2013ರಲ್ಲಿ) ಗೆದ್ದಿದೆ. ಬುಮ್ರಾ ಪ್ರಸ್ತುತ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿದ್ದರು. 31 ವರ್ಷದ ಬುಮ್ರಾ ಭಾರತದ 2024ರ ಟಿ20 ವಿಶ್ವಕಪ್ ಟ್ರೋಫಿ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲಿ ಅವರು 15 ವಿಕೆಟ್ ಪಡೆದು 8.26 ಸರಾಸರಿಯಲ್ಲಿ ಬೌಲಿಂಗ್ ಮಾಡಿದ್ದರು.

Leave a Reply

Your email address will not be published. Required fields are marked *