ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತç ಸಂಘ ಇದರ ೨೦೨೩-೨೪ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ೦೩.೧೦.೨೦೨೩ ರಂದು ಕಾಲೇಜು ಸಭಾಂಗಣಣದಲ್ಲಿ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸಹಕಾರಿ ಸಂಘ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀ ಸುದರ್ಶನ ಎಸ್.ಪಿ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ತಿಳಿಸುತ್ತಾ, ತಮ್ಮ ವಿದ್ಯಾರ್ಥಿ ಜೀವನದ ಸುಂದರ ಕ್ಷಣಗಳನ್ನು ನೆನಪಿಸಿಕೊಂಡರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಚಂದ್ರ ಗೌಡ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಕೃತಿಕಾ ಬಿ ಮತ್ತು ರತ್ನಸಿಂಚನ ಜೆ ಪ್ರಾರ್ಥಿಸಿ, ವಾಣಿಜ್ಯ ಶಾಸ್ತç ಸಂಘದ ಸಂಚಾಲಕಿ ಶ್ರೀಮತಿ ದಿವ್ಯಾ ಟಿ.ಎಸ್ ಸ್ವಾಗತಿಸಿದರು. ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಪ್ರಾಸ್ತಾವಿಕ ಮಾತನ್ನಾಡಿದರು. ವಿದ್ಯಾರ್ಥಿನಿ ಜಸ್ಮಿತಾ ವೈ ವಂದಿಸಿ, ಅಂಕಿತ ಮತ್ತು ಸಲ್ಮತ್ ಅಸ್ರ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಾಣಿಜ್ಯ ಶಾಸ್ತ
ವಿಭಾಗಕ್ಕೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ, ವಿಭಾಗದ ಉಪನ್ಯಾಸಕರುಗಳಾದ ಶ್ರೀ ಶ್ರೀಧರ ವಿ ಮತ್ತು ಶ್ರೀಮತಿ ಗೀತಾ ಶೆಣೈ ಇವರು ಸಹಕರಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…