ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಫೆ 15 ರಂದು ಕಡಬ ಸಂತ ಜೋಕಿಂ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ವಂದನೀಯ ಫಾ. ಅಮಿತ್ ರೂಡ್ರಿಗಸ್ ‘ಜೀವನದಲ್ಲಿ ಮೌಲ್ಯಯುತವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಆತಂಕ ರಹಿತವಾಗಿ ಬದುಕಲು ಕಲಿಯಬೇಕು ಎಂದು ಮಕ್ಕಳಿಗೆ ಹಿತವಚನ ನೀಡಿದರು.
ಅವರು ಗಿಡಕ್ಕೆ ನೀರೆರೆಯುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ಉದ್ಯಮಿ ರಾಯ್ ಅಬ್ರಹಾಂ, ದ.ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ. ರೆನ್ನಿ ಡಿಸೋಜರವರು ಮಾತನಾಡಿ ಶುಭ ಹಾರೈಸಿದರು.
ಸಮಾವೇಶದಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ನ ಸದಸ್ಯರುಗಳಿಗೆ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಶಾಲೆಗಳಲ್ಲಿ ಸಲಹಾ ಪೆಟ್ಟಿಗೆಯ ಅಗತ್ಯತೆ ಮತ್ತು ಬಳಕೆ, ಹಾಗು ವಾರ್ಷಿಕವಾಗಿ ಮಕ್ಕಳ ಹಕ್ಕುಗಳ ಕ್ಲಬ್ನ ಮೂಲಕ ನಡೆಸಬಹುದಾದ ಚಟುವಟಿಕೆಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಯಿತು.
ವೇದಿಕೆಯಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಜಿಲ್ಲಾ ಸಂಚಾಲಕರಾದ ಶ್ರೀಮತಿ ಆಶಾಲತಾ ಸುವರ್ಣ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಕಾರ್ಯದರ್ಶಿ ಶ್ರೀಮತಿ ಸುಮಂಗಲಾ ಶೆಣೈ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ. ಕ ಜಿಲ್ಲೆ ಇದರ ಜೊತೆ ಕಾರ್ಯದರ್ಶಿ ಶ್ರೀಮತಿ ಉಷಾ ನ್ಯಾಕ್, ಕೋಶಾಧಿಕಾರಿ ನಂದಾ ಪಾಯಸ್ ಹಾಗು ಕಡಬ ಸರಕಾರಿ ಮಾದರಿ ಶaಲೆಯ ಮುಖ್ಯ ಶಿಕ್ಷಕರಾದ ಆನಂದ ಅಜಿಲರವರು ವೇದಿಕೆಯಲ್ಲಿ ಉಪಸ್ಥತರಿದ್ದರು.
ಪಡಿ ಸಂಸ್ಥೆಯ ಸಂಯೋಜಕರಾದ ಶ್ರೀಮತಿ ಕಸ್ತೂರಿ ಬೊಳುವಾರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸುಮಂಗಲಾ ಶೆಣೈ ದನ್ಯವಾದ ನೀಡಿದರು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ. ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು,ಪಡಿ ಮಂಗಳೂರು,ಸಂತ ಜೋಕಿಂ ವಿದ್ಯಾ ಸಂಸ್ಥೆಗಳು ಕಡಬ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಡಬ ತಾಲೂಕು, ಮಹಿಳಾ ತರಬೇತುದಾರರ ಸಂಚಲನ ದ.ಕ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಪಂಚಾಯತು ಕಡಬ ತಾಲೂಕು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದ.ಕ ಇವರುಗಳ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ಕ್ಲಬ್‌ನ ಸದಸ್ಯರುಗಳ ಸಮಾವೇಶವು ನಡೆಯಿತು.