ಬೆಂಗಳೂರು: ಕಂದಾಯ ಇಲಾಖೆಯು ಪ್ರಾಕೃತಿಕ ವಿಪತ್ತುಗಳ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಸಂವಹನ ನೀಡುವ ಉದ್ದೇಶ ಹೊಂದಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಂದಾಯ ಇಲಾಖೆ ಹಾಗೂ ದೂರ ಸಂಪರ್ಕ ಇಲಾಖೆಯ ಜೊತೆಗೂಡಿ ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಸುತ್ತಿದೆ. ಇದರ ಪರೀಕ್ಷಾರ್ಥ ಪ್ರಯೋಗವು ಕರ್ನಾಟಕದಲ್ಲಿ ಅಕ್ಟೋಬರ್ 12 ರಂದು ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆ ಗೌಡ ಈಗಾಗಲೇ ಮಾಹಿತಿ ನೀಡಿದ್ದು. ಇದೀಗ ಹಲವರ ಮೊಬೈಲ್ ಫೋನ್ ನಲ್ಲಿ ದೊಡ್ಡದಾದ ಬೀಪ್ ಶಬ್ದದೊಂದಿಗೆ ಸಂದೇಶವೊಂದು ಬರುತ್ತಿದೆ. ಇದರಿಂದ ಗಾಬರಿಯಾಗುವ ಅವಶ್ಯಕತೆಯಿಲ್ಲ. ಯಾಕೇಂದರೆ ಈ ಸಂದೇಶ ನಿಜವಾದ ತುರ್ತು ಪರಿಸ್ಥಿತಿ ಸೂಚಿಸುವುದಿಲ್ಲ. ತುರ್ತು ಸನ್ನಿವೇಶ ಎದುರಾದಾಗ ವಿವಿಧ ಮೊಬೈಲ್ ಆಪರೇಟರ್‌ಗಳು ಮತ್ತು ಸೆಲ್ ಬ್ರಾಡ್‌ಕಾಸ್ಟ್ ಸಿಸ್ಟಮ್‌ಗಳ ತುರ್ತು ಎಚ್ಚರಿಕೆಯ ಪ್ರಸಾರ ಸಾಮರ್ಥ್ಯಗಳ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅಳೆಯಲು ಈ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಕಾಲಕಾಲಕ್ಕೆ ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಲಾಗುತ್ತಿದ್ದು ಕರ್ನಾಟಕದಲ್ಲಿ ಅಕ್ಟೋಬರ್ 12 ರಂದು ಪರೀಕ್ಷೆಗಳನ್ನು ಪ್ರಾರಂಭಿಸಲಾಗಿದೆ. ಸೆಲ್ ಬ್ರಾಡ್‌ಕಾಸ್ಟ್ ಅನ್ನು ಸಾಮಾನ್ಯವಾಗಿ ತುರ್ತು ಎಚ್ಚರಿಕೆಗಳನ್ನು ನೀಡಲು ಬಳಸಲಾಗುತ್ತದೆ. ಉದಾಹರಣೆಗೆ ಸುನಾಮಿ, ಪ್ರವಾಹಗಳು, ಭೂಕಂಪಗಳು ಮುಂತಾದ ತೀವ್ರ ಹವಾಮಾನ ಎಚ್ಚರಿಕೆಗಳನ್ನು ನೀಡಲು ಇದು ಸಹಕಾರಿಯಾಗಿದೆ. ಡಿಪಾರ್ಟ್‌ಮೆಂಟ್ ಆಫ್ ಟೆಲಿಕಾಂ ಪ್ರಕಾರ, ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಒಂದು ತಂತ್ರಜ್ಞಾನವಾಗಿದ್ದು, ಸ್ವೀಕರಿಸುವವರು ನಿವಾಸಿಗಳು ಅಥವಾ ಸಂದರ್ಶಕರು ಎಂಬುದನ್ನು ಲೆಕ್ಕಿಸದೆ, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲ ಮೊಬೈಲ್ ಸಾಧನಗಳಿಗೆ ವಿಪತ್ತು ನಿರ್ವಹಣೆಗಾಗಿ ನಿರ್ಣಾಯಕ ಮತ್ತು ಸಮಯ- ಸೂಕ್ಷ್ಮ ಸಂದೇಶಗಳನ್ನು ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ಮಾಡಿಕೊಡುತ್ತದೆ. ಸಂಭಾವ್ಯ ಬೆದರಿಕೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಮತ್ತು ಅವರಿಗೆ ಮಾಹಿತಿ ನೀಡಲು ಸರ್ಕಾರಿ ಏಜೆನ್ಸಿಗಳು ಮತ್ತು ತುರ್ತು ಸೇವೆಗಳು ಇದನ್ನು ಬಳಸುತ್ತವೆ. ಅಗತ್ಯ ತುರ್ತು ಮಾಹಿತಿಯು ಸಕಾಲಿಕವಾಗಿ ಗರಿಷ್ಠ ಜನರನ್ನು ತಲುಪುವುದನ್ನು ಅಲರ್ಟ್ ಸಿಸ್ಟಮ್ ಖಚಿತಪಡಿಸುತ್ತದೆ ಎಂದು ಸರ್ಕಾರ ಹೇಳಿದೆ
Advertisement
Advertisement