ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಸುಳ್ಯ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಸುಳ್ಯ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ರಿಯಾನ್ ಸಅದಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಶಮೀರ್ ಮೊಗರ್ಪಣೆ, ಮುಖಂಡರಾದ ಕಬೀರ್ ಜಟ್ಟಿಪ್ಪಳ್ಳ ನಿಯೋಗದಲ್ಲಿದ್ದರು.