ಹುಬ್ಬಳ್ಳಿ, ಜುಲೈ 10: ಆನ್ಲೈನ್ ಗೇಮ್ (Online Game) ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದರ್ದೈವಿ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ (BVB College) ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ನೆಲಸಿದ್ದನು. ರಾಕೇಶ್ ಪ್ರತಿದಿನವೂ ಆನ್ಲೈನ್ ಗೇಮ್ ಆಡುತ್ತಿದ್ದನು. ಆನ್ಲೈನ್ ಗೇಮ್ನಿಂದ ಹಣ ಕಳೆದುಕೊಂಡಿದ್ದ ರಾಕೇಶ್ ಮನನೊಂದು ತಾನು ಇದ್ದ ಕೋಣೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.