ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಮಾಜಿ ಸಿಎಂ ಬರೆದಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ