ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು ಅವರು (ವಿಹೆಚ್‍ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ