ಸುಳ್ಯ: ನಾಲ್ಕು ವರ್ಷ ಪ್ರಾಯವುಳ್ಳ ಮಗಳ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ವರದಿಯಾಗಿದೆ. ತಾಯಿ ಅಸುನೀಗಿದ್ದು, ಮಗಳು ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಮೃತಪಟ್ಟವರು ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎಂದು ತಿಳಿದುಬಂದಿದೆ. ಗೀತಾ ರವರು ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಗುಮಾಸ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದರು.‌ ಗೀತಾ ತನ್ನ ನಾಲ್ಕು ವರ್ಷದ ಮಗಳು ಪೂರ್ವಿಕಳೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಮುಂಜಾನೆ ಮನೆಯವರು ಎದ್ದಾಗ ಗೀತಾ ರವರು ಮನೆಯಲ್ಲಿ ಇರದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂದಿದೆ. ಮಗಳು ಬಾವಿಯೊಳಗೆ ಇದ್ದ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು ಆಕೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಿರುವುದಾಗಿ ತಿಳಿದು ಬಂದಿದೆ

.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ