ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ 16 ವರ್ಷದ ಶ್ರೀ ನಿಧಿ ಎಂಬ ವಿದ್ಯಾರ್ಥಿನಿ ಶಾಲೆಗೆ ಹೋಗುವಾಗಲೇ ಎದೆನೋವಿನಿಂದ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಸಿದು ವಿದ್ಯಾರ್ಥಿನಿಯನ್ನು ಶಾಲಾ ಶಿಕ್ಷಕರು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಅವಳನ್ನು ಪರೀಕ್ಷಿಸಿದ ವೈದ್ಯರು ಶ್ರೀ ನಿಧಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.

ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಶ್ರೀ ನಿಧಿಯಂತಹ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆಘಾತ ತಂದಿದೆ ಶಿಕ್ಷಕರು ಹೇಳಿದ್ದಾರೆ.

Leave a Reply

Your email address will not be published. Required fields are marked *